ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಸಮುದ್ರಪಾಲು
ಭಟ್ಕಳ: ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಮುರುಡೇಶ್ವರಕ್ಕೆ ಬಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದು ಈ ವೇಳೆ ಮೂವರನ್ನು ರಕ್ಷಣೆ ಮಾಡಲಾಗಿದ್ದು ಅದರಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದರೆ ಎಂದು ತಿಳಿದು ಬಂದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಒಟ್ಟು 54 ವಿದ್ಯಾರ್ಥಿಗಳು ಮುರುಡೇಶ್ವರಕ್ಕೆ ಮಂಗಳವಾರ ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದು, ದೇವರ ದರ್ಶನ ಮುಗಿಸಿ ಬಳಿಕ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ತೆರಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಮುರುಡೇಶ್ವರ ಪೋಲಿಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Next Story