ಭಟ್ಕಳ: ಅಕ್ರಮ ಗೋ ಸಾಗಾಟ ಆರೋಪ; ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಭಟ್ಕಳ: ಭಟ್ಕಳದಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಮೆರವಣಿಗೆಯ ನಂತರ ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆ ಸಂಚಾಲಕ ಜಯಂತ ನಾಯ್ಕ, ಸಹಸಂಚಾಲಕ ನಾಗೇಶ ನಾಯ್ಕ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ರಾಮಕೃಷ್ಣ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ಮಾಜಿ ನಿಗಮ ಮಂಡಲ ಅಧ್ಯಕ್ಷ ಗೋವಿಂದ ನಾಯ್ಕ, ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಹಿಂದೂ ಜಾಗರಣ ವೇದಿಕೆ ಕಾನೂನು ಸಲಹೆಗಾರ ರಾಜೇಶ್ ನಾಯ್ಕ ಹಾಗೂ ಇತರರು ಭಾಗವಹಿಸಿದ್ದರು.
Next Story