ಭಟ್ಕಳ: ಬಾಂಗ್ಲದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂಜಾವೇಯಿಂದ ಪ್ರತಿಭಟನೆ
ಭಟ್ಕಳ: ಬಾಂಗ್ಲಾದೇಶದಲ್ಲಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಭಟ್ಕಳದ ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್ ಶುಕ್ರವಾರ ಬೃಹತ್ ಪ್ರತಿಭನಾ ಮೆರವಣೆಗೆ ನಡೆಸಿತು.
ಈ ಸಂದರ್ಭದಲ್ಲಿ ಜನದಟ್ಟಣೆಯಿಂದಾಗಿ ರಾ.ಹೆ.66 ಸುಮಾರು ಒಂದು ಗಂಟೆಗೂ ಅಧಿಕ ಕಾಲ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.
ಇಲ್ಲಿನ ಶ್ರೀ ಚೆನ್ನಪಟ್ಟಣ ಹನುಮಂತ ದೇವಸ್ಥಾನದ ವಿನಾಯಕ ರಂಗ ಮಂಟಪದಿಂದ ಆರಂಭಗೊಂಡ ಪ್ರತಿಭಟನಾ ಮೆರವಣೆಗೆ ಹೂವಿನಪೇಟೆ ರಸ್ತೆ, ಮುಖ್ಯ ಪೇಟೆ ರಸ್ತೆಯಿಂದ ಮಾರಿಗುಡಿ ದೇವಸ್ಥಾನದ ಮಾರ್ಗವಾಗಿ ಭಟ್ಕಳ ಶಮ್ಸುದ್ದೀನ್ ಸರ್ಕಲ್ ಮೂಲಕ ಅಲ್ಲಿಂದ ಹಳೆ ಬಸ್ ನಿಲ್ದಾಣದ ಬಳಿ ಇರುವ ಸಾರ್ವಜನಿಕ ಗಣೇಶೋತ್ಸವ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರಾನಂದ ವಜ್ರದೇಹಿ ಸಂಸ್ಥಾನದ ಸ್ವಾಮೀಜಿ ಮಾತನಾಡಿದರು. ಅಧ್ಯಕ್ಷತೆಯನ್ನು ಭಟ್ಕಳ ವಿಶ್ವ ಹಿಂದು ಪರಿಷತ್ ಉಪಾಧ್ಯಕ್ಷ, ಗೋವಿಂದ ಎನ್. ಖಾರ್ವಿ ವಹಿಸಿದ್ದರು.
ಬಿಜೆಪಿ ಮಾಜಿ ಶಾಸಕ ಸುನಿಲ್ ನಾಯ್ಕ, ಕೃಷ್ಣ ನಾಯ್ಕ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.