ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ
ಭಟ್ಕಳ : ಮುರ್ಡೇಶ್ವರ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನ ರಕ್ಷಿಸಿದ ಘಟನೆ ಸೋಮವಾರ ನಡೆದಿದೆ.
ಬಾಗಲಕೋಟೆ ಮೂಲದ ಬಸವನಗೌಡ ಪಾಟೀಲ್(22), ಶರಣು ಇಂಚಲ್(21), ರವಿಚಂದ್ರನ್(22) ರಕ್ಷಣೆಗೊಳಗಾದ ಪ್ರವಾಸಿಗರು. ರಜೆಯ ಕಾರಣ ಇವರು ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದರು. ಬೆಳಗ್ಗೆ ಸಮುದ್ರ ತೀರದಲ್ಲಿ ಈಜಲು ಇಳಿದಿದ್ದರು. ನೀರಿನ ಸುಳಿಗೆ ಸಿಲುಕಿದಾಗ ಕೂಡಲೇ ಲೈಫ್‌ಗಾರ್ಡ್ ಸಿಬ್ಬಂದಿಗಳಾದ ಶಶಿ, ಪಾಂಡು, ರಾಮಚಂದ್ರ ಎಂಬವರು ಧಾವಿಸಿ ಪ್ರವಾಸಿಗರನ್ನ ರಕ್ಷಿಸಿದ್ದಾರೆ.
ಅಸ್ವಸ್ಥಗೊಂಡವರಿಗೆ ಲೈಫ್‌ಗಾರ್ಡ್ ಸಿಬ್ಬಂದಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
Next Story