ಶಿರೂರು ಗುಡ್ಡ ಕುಸಿತ ಪ್ರಕರಣ: ಅರ್ಜುನ್ ಪತ್ತೆಗೆ ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ
ಕಾರವಾರ, ಜು.24: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ ಬುಧವಾರ ಆರಂಭಿಸಲಾಗಿದೆ.
ಒಂದು ವಾರದ ಹಿಂದೆ ಶಿರೂರು ಗುಡ್ಡ ಕುಸಿತ ಸಂಭವಿಸಿದ ವೇಳೆ ಮಣ್ಣಿನ ಅಡಿಯಲ್ಲಿ ಕೇರಳ ಮೂಲದ ಅರ್ಜುನ್ ಹಾಗೂ ಲಾರಿ ಹುದುಗಿ ಹೋಗಿರುವುದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪತ್ತೆ ಕಾರ್ಯ ಮಾಡಲಾಗುತ್ತಿದ್ದು, ಗುಡ್ಡ ಕುಸಿದ ಪ್ರದೇಶದಲ್ಲಿ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಬಳಿಕ ಮಣ್ಣಿನ ಸಮೇತವಾಗಿ ಅರ್ಜುನ್ ಇದ್ದ ಲಾರಿ ಗಂಗಾವಳಿ ನದಿಯಲ್ಲಿ ಮುಳುಗಡೆ ಆಗಿರಬಹುದು ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಕ್ಲೆನ್ ಯಂತ್ರ ಬಳಸಿ ಪತ್ತೆ ಕಾರ್ಯ ಆರಂಭಿಸಲಾಗಿದೆ. ಈ ಸಂದರ್ಭದಲ್ಲಿ ನೌಕಾನೆಲೆ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
Next Story