ಯಲ್ಲಾಪುರ: ಕೆಎಸ್ಸಾರ್ಟಿಸಿ ಬಸ್ ಪಲ್ಟಿ; 23 ಮಂದಿಗೆ ಗಾಯ
ಕಾರವಾರ, ಫೆ11: ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾಗಿ 23 ಜನ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ.
ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಬಸ್ ಚಾಲಕ ರೋಣದ ಅಶೋಕ ಹಾಗೂ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯಲ್ಲಾಪುರದ ಶಿಕ್ಷಕಿ ಭುವನೇಶ್ವರಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 21 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story