ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
PC: freepic
ಹೊಸಪೇಟೆ :ವಿಜಯನಗರ 2024-25ನೇ ಶೈಕ್ಷಣಿಕ ಸಾಲಿಗೆ ಹೊಸಪೇಟೆಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಇಂಗ್ಲೀಷ್ ಮತ್ತು ಸಮಾಜ ವಿಜ್ಞಾನ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅ.23 ಅರ್ಜಿ ಸಲ್ಲಿಸಲು ಕೊನೆಯ ದಿನ. ನಿಗದಿತ ವಿದ್ಯಾರ್ಹತೆ ಉಳ್ಳವರು ನೇರವಾಗಿ ಶಾಲೆಗೆ ಭೇಟಿ ನೀಡಬಹುದಾಗಿದೆ ಅಥವಾ ತಮ್ಮ ಸ್ವ ವಿವರದ ಮಾಹಿತಿಯನ್ನು ವಾಟ್ಸಾಪ್ ನಂಬರ್ 9741342530 ಗೆ ಕಳುಹಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story