ಹೊಸಪೇಟೆ | ಸಿರಸಂಗಿ ಶ್ರೀ ಲಿಂಗರಾಜ ದೇಸಾಯಿ ಅವರ 164ನೇ ಜಯಂತ್ಯೋತ್ಸವ
ಹೊಸಪೇಟೆ : ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭೆಯ ಸಂಸ್ಥಾಪಕ ಅಧ್ಯಕ್ಷರಾದ ತ್ಯಾಗವೀರ ಮಹಾದಾನಿ ಸಿರಸಂಗಿ ಶ್ರೀ ಲಿಂಗರಾಜ ದೇಸಾಯಿ ಅವರ 164ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಹೊಪೇಟೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ವಿಜಯನಗರ ಶಾಸಕರಾದ ಎಚ್.ಆರ್.ಗವಿಯಪ್ಪ ಅವರು ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ.ಪಾಟೀಲ್, ಬಸವಲಿಂಗ ಸ್ವಾಮೀಜಿ, ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಾಸಕರಾದ ನೇಮರಾಜ್, ಅನ್ನಪೂರ್ಣ, ಜನಪದ ಸಾಹಿತಿ ಡಾ.ಶಂಭು ಬಳಿಗಾರ (ವನಸಿಗ್ಲಿ) ಸೇರಿದಂತೆ ಹಲವು ಗಣ್ಯರು, ಮುಖಂಡರು ಭಾಗವಹಿಸಿದ್ದರು.
ಜಯಂತೋತ್ಸವದ ಕಾರ್ಯಕ್ರಮದಲ್ಲಿ ಹಲವು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಲಿಂಗಾಯತ ಸಮಾಜದ ಮುಖಂಡರು ಜನಸಾಮಾನ್ಯರು ಆಗಮಿಸಿದ್ದರು.
Next Story