ಹೊಸಪೇಟೆ | ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ

ಹೊಸಪೇಟೆ : ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಅಂಗವಾಗಿ ಹಲವಾರು ಸಂಘ ಸಂಸ್ಥೆಗಳಿಂದ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.
ನಗರದ 15ನೇ ವಾರ್ಡ್ ಅಮರಾವತಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘ ದಿಂದ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮುಖಾಂತರ ವಿದ್ಯಾರ್ಥಿಗಳು ಕಳಸ ಹೊತ್ತುಕೊಂಡು ಮೆರವಣಿಗೆ ನಡೆಸಿದರು.
ದಲಿತ ಸೇನಾ ಸಂಘ ವಿಜಯನಗರ ಜಿಲ್ಲೆ ಇವರ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಆರೋಗ್ಯ ಅಧಿಕಾರಿ ಭಾಸ್ಕರ್ ರವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಬಿ.ಎಲ್.ಶ್ರೀಹರಿಬಾಬು, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮುಹಮ್ಮದ್ ಅಕ್ರಮ್ ಅಲಿ ಷಾ, ಹೊಸಪೇಟೆ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಎಚ್.ಎನ್.ಮುಹಮ್ಮದ್ ಇಮಾಮ ನಿಯಾಜಿ, ನಗರಸಭೆ ಆಯುಕ್ತರು ಚಂದ್ರಪ್ಪ, ಮತ್ತು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

Next Story