ವಿಜಯನಗರ | ಅರಿವು ಕೇಂದ್ರದ ಮೇಲ್ವಿಚಾರಕ ಅಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಅವಕಾಶ

ವಿಜಯನಗರ(ಹೊಸಪೇಟೆ) : ಜಿಪಂ ವ್ಯಾಪ್ತಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೇರಿ ಗ್ರಾಪಂ ಅರಿವು ಕೇಂದ್ರದ ಮೇಲ್ವಿಚಾರಕರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಪಂ ವೆಬ್‌ಸೈಟ್ http://zpvijayanagara.karnataka.gov.in ಹಾಗೂ http://vijayanagara.nic.in ನಲ್ಲಿ ಪ್ರಕಟಿಸಲಾಗಿದೆ.
ಆಯ್ಕೆ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಮೇ 7 ರಂದು ಮಧ್ಯಾಹ್ನ 1:30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತ ರೂಪದಲ್ಲಿ ಸದಸ್ಯ ಕಾರ್ಯದರ್ಶಿ, ಆಯ್ಕೆ ಸಮಿತಿ ಹಾಗೂ ಉಪಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ವಿಜಯನಗರ, ಜಿಲ್ಲಾಧಿಕಾರಿಗಳ ಕಟ್ಟಡ, ಟಿಬಿಡ್ಯಾಂ ರಸ್ತೆ, ಹೊಸಪೇಟೆ-583225 ಈ ವಿಳಾಸಕ್ಕೆ ನೊಂದಣಿ ಅಂಚೆ ಮೂಲಕ ಅಥವಾ ಖುದ್ದಾಗಿ ಜಿಪಂ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story