ವಿಜಯನಗರ | ಎ.15 ರಿಂದ 25 ರವರೆಗೆ ಕೆಓಎಸ್ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆಗೆ ಜಿಲ್ಲಾಧಿಕಾರಿ ಆದೇಶ

ವಿಜಯನಗರ(ಹೊಸಪೇಟೆ) : ನಗರದ ಸೇಂಟ್ ಜೋಸೆಫ್ ಹೈ ಸ್ಕೂಲ್‌ನಲ್ಲಿ ಏಪ್ರಿಲ್ ಎ.15 ರಿಂದ 25 ರವರೆಗೆ ನಡೆಯಲಿರುವ ಕೆ.ಓ.ಎಸ್ ಪರೀಕ್ಷೆಗಳ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರದ ಬಳಿಯಿರುವ ಝೆರಾಕ್ಸ್, ಕಂಪ್ಯೂಟರ್ ಮತ್ತು ಸೈಬರ್ ಅಂಗಡಿಗಳನ್ನು ಮುಚ್ಚುವಂತೆ ತಿಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಪರೀರ್ಕ್ಷಾರ್ಥಿಗಳಲ್ಲದ, ಪರೀಕ್ಷಾ ಉಸ್ತುವಾರಿ ಇಲ್ಲದ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಅಥವಾ ಯಾವುದೇ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಕಡ್ಡಾಯವಾಗಿ ಪ್ರವೇಶ ನಿಷೇಧಿಸಿದೆ. ಆದೇಶವನ್ನು ಉಲ್ಲಂಘಿಸಿ ಪ್ರವೇಶಿಸಿದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ತಿಳಿಸಿದ್ದಾರೆ.
Next Story