ವಿಜಯಪುರ | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು : ಮೂವರು ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ

ವಿಜಯಪುರ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಬಳಿಯ ಹೆಗಡಿಹಾಳ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಉತ್ನಾಳ ಗ್ರಾಮದ ನಿವಾಸಿಗಳಾದ ಭೀರಪ್ಪ ಗೋಡೆಕರ್ (30), ಹಣಮಂತ ಕಡ್ಲಿಮಟ್ಟಿ (25), ಯಮನಪ್ಪ ನಾಟೀಕಾರ್ (19) ಎಂದು ಗುರುತಿಸಲಾಗಿದೆ. ಉಮೇಶ ಭಜಂತ್ರಿ (20) ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story