ವಿಜಯಪುರ | ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ; ಮಕ್ಕಳು ಮೃತ್ಯು, ತಾಯಿ ಪಾರು
ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ.
ಮೃತ ಮಕ್ಕಳನ್ನು ತನು ನಿಂಗರಾಜ ಭಜಂತ್ರಿ(5), ರಕ್ಷಾ ಭಜಂತ್ರಿ(3), ಹಸನ್ ನಿಂಗರಾಜ ಭಜಂತ್ರಿ(2), ಹುಸೇನ್ ಭಜಂತ್ರಿ ಎಂದು ಗುರುತಿಸಲಾಗಿದೆ. ಮೃತರು ಕೊಲಾರ ತಾಲೂಕಿನ ತೆಲಗಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ
ಕಾಲುವೆಗೆ ಹಾರಿದ್ದ ತಾಯಿ ಭಾಗ್ಯಳನ್ನು ಸ್ಥಳೀಯರು ರಕ್ಷಿಸಿದ್ದು, ಇಬ್ಬರು ಮಕ್ಕಳ ಮೃತದೇಹವನ್ನು ಮೀನುಗಾರರು ಹೊರತೆಗೆದಿದ್ದಾರೆ. ಮತ್ತಿಬ್ಬರ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ನಿಡಗುಂದಿ ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಧಾವಿಸಿದ್ದಾರೆ.
Next Story