ವಿಜಯಪುರ: ದನಕರು ಸಾಗಾಟಗಾರನ ಮೇಲೆ ಬಜರಂಗ ದಳದಿಂದ ತೀವ್ರ ಹಲ್ಲೆ
ಗಾಯಾಳು ಆಸ್ಪತ್ರೆಗೆ ದಾಖಲು: ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ವಿಜಯಪುರ, ಮೇ 3: ಗೂಡ್ಸ್ ವಾಹನದಲ್ಲಿ ದನ-ಕರುಗಳನ್ನು ಕೊಂಡೊಯ್ಯುತ್ತಿದ್ದ ವ್ಯಕ್ಯಿಯೊಬ್ಬನಿಗೆ ಬಜರಂಗದಳ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿರುವುದು ವರದಿಯಾಗಿದೆ.
ಬಂದೇ ನವಾಝ್ ಜಾತಗಾರ ಹಲ್ಲೆಗೊಳಗಾದವರು. ಬಜರಂಗ ದಳದ ಮುಖಂಡರಾದ ವೀರೇಶ ಹಿರೇಮಠ, ರಾಜು ಬಿರಾದಾರ ಸೇರಿದಂತೆ 15-20 ಮಂದಿಯ ತಂಡ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.
ಬಂದೇ ನವಾಝ್ ಗೂಡ್ಸ್ ವಾಹನದಲ್ಲಿ ಎರಡು ಹೋರಿ, ಒಂದು ಆಕಳು, ಒಂದು ಎಮ್ಮೆಯ ಕರುಗಳನ್ನು ಬಬಲೇಶ್ವರದಿಂದ ವಿಜಯಪುರಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ದುಷ್ಕರ್ಮಿಗಳು ತಡೆದು ಹಿಗ್ಗಾಮುಗ್ಗಾ ಥಳಿಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ನವಾಝ್ ಮೈಮೇಲೆ ಅಲ್ಲಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story