Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಿಬಿಎಂಪಿಯಲ್ಲಿ ಅಕ್ರಮ, ಭ್ರಷ್ಟಾಚಾರ:...

ಬಿಬಿಎಂಪಿಯಲ್ಲಿ ಅಕ್ರಮ, ಭ್ರಷ್ಟಾಚಾರ: ಖಡಕ್ ಅಧಿಕಾರಿಗಳನ್ನು ತನಿಖಾ ತಂಡದಿಂದ ಕೈಬಿಟ್ಟ ನಗರಾಭಿವೃದ್ಧಿಇಲಾಖೆ

-ಜಿ.ಮಹಾಂತೇಶ್-ಜಿ.ಮಹಾಂತೇಶ್8 Aug 2023 9:51 AM IST
share
ಬಿಬಿಎಂಪಿಯಲ್ಲಿ ಅಕ್ರಮ, ಭ್ರಷ್ಟಾಚಾರ: ಖಡಕ್ ಅಧಿಕಾರಿಗಳನ್ನು ತನಿಖಾ ತಂಡದಿಂದ   ಕೈಬಿಟ್ಟ ನಗರಾಭಿವೃದ್ಧಿಇಲಾಖೆ

ಬೆಂಗಳೂರು, ಆ8: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ, ರಸ್ತೆ ನಿರ್ಮಾಣ, ದುರಸ್ತಿ ಸೇರಿದಂತೆ ಇತರ ಯೋಜನೆಗಳಲ್ಲಿ ನಡೆದಿದೆ ಎನ್ನಲಾದ ವ್ಯಾಪಕ ಅಕ್ರಮ, ಭ್ರಷ್ಟಾಚಾರ, ಅಧಿಕಾರ ಮತ್ತು ಹಣಕಾಸು ದುರುಪಯೋಗಳ ಕುರಿತು ತನಿಖೆ ನಡೆಸುವ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೊದಲು ಬರೆದಿದ್ದಾರೆ ಎನ್ನಲಾಗಿರುವ ಟಿಪ್ಪಣಿಯಲ್ಲಿ ಹೆಸರಿಸಿದ್ದ ಖಡಕ್ ಅಧಿಕಾರಿಗಳನ್ನು ಬದಲಾಯಿಸಿರುವುದು ಇದೀಗ ಬಹಿರಂಗವಾಗಿದೆ.

ಐಎಎಸ್ ಅಧಿಕಾರಿಗಳಾದ ರಾಜೇಂದರ್ ಕುಮಾರ್ ಕಟಾರಿಯಾ, ಹರ್ಷ ಗುಪ್ತಾ, ಮುನೀಶ್ ಮೌದ್ಗಿಲ್, ರಶ್ಮಿ ಮಹೇಶ್ ಮತ್ತು ವಿಶಾಲ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್ ಅವರಿಗೆ ಡಿ.ಕೆ. ಶಿವಕುಮಾರ್ ಅವರು 2023ರ ಜೂನ್ 19ರಂದು ಟಿಪ್ಪಣಿ ಹೊರಡಿಸಿದ್ದರು.

ಆದರೀಗ ನಗರಾಭಿವೃದ್ಧಿ ಇಲಾಖೆಯು 2023ರ ಆಗಸ್ಟ್ 5ರಂದು ಹೊರಡಿಸಿರುವ ಆದೇಶದಲ್ಲಿ ರಾಜೇಂದರ್ ಕುಮಾರ್ ಕಟಾರಿಯಾ, ಹರ್ಷ ಗುಪ್ತಾ, ಮುನೀಶ್ ಮೌದ್ಗಿಲ್, ರಶ್ಮಿ ಮಹೇಶ್ ಅವರ ಹೆಸರನ್ನು ಕೈಬಿಡಲಾಗಿದೆ. ಬದಲಿಗೆ ಮೊದಲ ಟಿಪ್ಪಣಿಯಲ್ಲಿದ್ದ ಡಾ.ವಿಶಾಲ್ ಅವರ ಹೆಸರು ಮಾತ್ರ ಇದೆ.

ಡಿ.ಕೆ. ಶಿವಕುಮಾರ್ ಮೊದಲು ಬರೆದಿದ್ದಾರೆ ಎನ್ನಲಾದ ಟಿಪ್ಪಣಿ ಪ್ರಕಾರ ಘನ ತ್ಯಾಜ್ಯ ನಿರ್ವಹಣೆ ಕಾಮಗಾರಿಗಳ ಬಗ್ಗೆ ತನಿಖಾ ಸಮಿತಿಗೆ ವಿ. ರಶ್ಮಿ ಮಹೇಶ್, ಐಎಎಸ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಸೂಚಿಸಲಾಗಿತ್ತು.

ಆದರೆ ಆಗಸ್ಟ್ ೫ರಂದು ಹೊರಡಿಸಿರುವ ಆದೇಶದಲ್ಲಿ ಉಜ್ವಲ್ ಕುಮಾರ್ ಘೋಷ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಉಳಿದಂತೆ ಸಮಿತಿ ಸದಸ್ಯರ ಪಟ್ಟಿಯಲ್ಲಿ ಕ್ಯಾಪ್ಟನ್ ದೊಡ್ಡಿಹಾಳ್, ಲೋಕೋಪಯೋಗಿ ಇಲಾಖೆಯ ನಿವೃತ್ತ ಚೀಫ್ ಇಂಜಿನಿಯರ್, ಬಸವರಾಜ ಕೋಟಿ, ನಿವೃತ್ತ ಮುಖ್ಯ ಇಂಜಿನಿಯರ್ ಅವರನ್ನು ಉಳಿಸಿಕೊಂಡು ನಿವೃತ್ತ ಮುಖ್ಯ ಇಂಜಿನಿಯರ್ ಬೀಸೇಗೌಡ ಅವರನ್ನು ಕೈಬಿಡಲಾಗಿದೆ. ಅವರ ಜಾಗಕ್ಕೆ ಟಿ. ಪ್ರಭಾಕರ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಅದೇ ರೀತಿ ರಸ್ತೆ, ಮೂಲಭೂತ ಸೌಕರ್ಯಗಳ ವಿಭಾಗದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ತನಿಖಾ ಸಮಿತಿಗೆ ಹರ್ಷ ಗುಪ್ತಾ, ಐಎಎಸ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು. ಅನಿಲ್‌ಕುಮಾರ್ ಮುಖ್ಯ ಇಂಜಿನಿಯರ್, ಪಿಡಬ್ಲ್ಯುಡಿ, ಜ್ವಾಲೇಂದ್ರಕುಮಾರ್, ಮಾಜಿ ಜಿಎಂ, ಎನ್‌ಎಚ್‌ಎಐ, ನಿವೃತ್ತ ಮುಖ್ಯ ಅಭಿಯಂತರರಾದ ಕೆ. ಮೋಹನ್ ಅವರನ್ನು ಸಮಿತಿ ಸದಸ್ಯರನ್ನಾಗಿಸಬೇಕು ಎಂದು ನಿರ್ದೇಶಿಸಲಾಗಿತ್ತು.

ಆದರೆ ಆಗಸ್ಟ್ ೫ರಂದು ಹೊರಡಿಸಿರುವ ಆದೇಶದಲ್ಲಿ ಈ ಸಮಿತಿಗೆ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹಾಗೆಯೇ ಪಿಡಬ್ಲ್ಯುಡಿ, ಜ್ವಾಲೇಂದ್ರಕುಮಾರ್, ಮಾಜಿ ಜಿಎಂ, ಎನ್‌ಎಚ್‌ಎಐ, ನಿವೃತ್ತ ಮುಖ್ಯ ಅಭಿಯಂತರರಾದ ಕೆ. ಮೋಹನ್ ಅವರನ್ನು ಸಮಿತಿಯಲ್ಲಿ ಉಳಿಸಿಕೊಂಡು ಅನಿಲ್‌ಕುಮಾರ್ ಅವರನ್ನು ಕೈಬಿಡಲಾಗಿದೆ. ಈ ಜಾಗಕ್ಕೆ ನಿವೃತ್ತ ಪ್ರಧಾನ ಇಂಜಿನಿಯರ್ ಪ್ರಭಾಕರ್ ಡಿ. ಹಮ್ಮಿಗೆ, ಬಸವರಾಜ್ ಶಂಶಿಮಠ್ ಅವರನ್ನು ನೇಮಿಸಲಾಗಿದೆ.

ಬೃಹತ್ ನೀರುಗಾಲುವೆ ಕಾಮಗಾರಿಗಳ ಬಗ್ಗೆ ತನಿಖಾ ಸಮಿತಿಗೆ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು. ನಿವೃತ್ತ ಕಾರ್ಯದರ್ಶಿ, ಇಐಸಿಆರ್, ಎಚ್.ಎಚ್. ಬಿ. ಸಿದ್ದಲಿಂಗಪ್ಪ, ಆರ್. ರಾಮಕೃಷ್ಣಗೌಡ, ನಿವೃತ್ತ ಚೀಫ್ ಇಂಜಿನಿಯರ್, ಮಲ್ಲೇಶ್, ನಿವೃತ್ತ ಕಾರ್ಯಪಾಲಕ ಅಭಿಯಂತರರನ್ನು ಸದಸ್ಯರನ್ನಾಗಿ ನೇಮಿಸಲು ಸೂಚಿಸಲಾಗಿತ್ತು.

ಆಗಸ್ಟ್ ೫ರಂದು ಹೊರಡಿಸಿರುವ ಆದೇಶದಲ್ಲಿ ಈ ಸಮಿತಿಗೆ ಪಿ.ಸಿ. ಜಾಫರ್ ಅವರನ್ನು ಅಧ್ಯಕ್ಷರನ್ನಾಗಿಸಲಾಗಿದೆ. ಹಿಂದಿನ ಟಿಪ್ಪಣಿಯಲ್ಲಿ ಹೆಸರಿಸಿದ್ದ ಸದಸ್ಯರನ್ನೇ ಮುಂದುವರಿಸಲಾಗಿದೆ.

ಕೆರೆ ಅಭಿವೃದ್ಧಿ ಕಾಮಗಾರಿಗಳ/ಒಎಫ್‌ಸಿ ಅನುಮತಿ ಬಗ್ಗೆ ಐಎಎಸ್ ಅಧಿಕಾರಿ ಡಾ. ವಿಶಾಲ್ ಆರ್., ಅವರ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ರಚಿಸಬೇಕು. ಈ ಸಮಿತಿಗೆ ನಿವೃತ್ತ ಕಾರ್ಯಪಾಲಕ ಇಂಜಿನಿಯರ್‌ಗಳಾದ ನಂಜಯ್ಯ, ಎಚ್. ಪ್ರಕಾಶ್‌ರನ್ನು ಸದಸ್ಯರನ್ನಾಗಿ ನೇಮಿಸಬೇಕು ಎಂದು ಸೂಚಿಸಿರುವುದು ಟಿಪ್ಪಣಿಯಿಂದ ಗೊತ್ತಾಗಿದೆ.

ಆಗಸ್ಟ್ 5ರಂದು ಹೊರಡಿಸಿರುವ ಆದೇಶದ ಪ್ರಕಾರ ನಂಜಯ್ಯ ಅವರ ಹೆಸರನ್ನು ಕೈಬಿಡಲಾಗಿದೆ. ಉಳಿದಂತೆ ಬೀಸೇಗೌಡ, ಎಚ್.ಪಿ. ಪ್ರಕಾಶ್, ಶ್ರೀಕಾಂತ್, ಎಚ್. ಕುಮಾರ್, ಜಿ.ಎಸ್. ಗೋಪಿನಾಥ್ ಅವರ ಹೆಸರನ್ನು ಸೇರಿಸಲಾಗಿದೆ.

ವಾರ್ಡ್ ಮಟ್ಟದ ಕಾಮಗಾರಿಗಳ ಬಗ್ಗೆ ತನಿಖಾ ಸಮಿತಿಗೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯಾದ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ಅಧ್ಯಕ್ಷರನ್ನಾಗಿಸಬೇಕು. ಈ ಸಮಿತಿಗೆ ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಪಿ.ಎಂ. ಸುರೇಶ್, ಎಚ್. ಕುಮಾರ್ ಇವರನ್ನು ಸದಸ್ಯರನ್ನಾಗಿಸಬೇಕು ಎಂದು ಮೊದಲಿನ ಟಿಪ್ಪಣಿಯಲ್ಲಿ ಸೂಚಿಸಲಾಗಿತ್ತು.

ಆದರೆ ಆಗಸ್ಟ್ ೫ರಂದು ಹೊರಡಿಸಿರುವ ಆದೇಶದಲ್ಲಿ ವಾರ್ಡ್ ಮಟ್ಟದ ಕಾಮಗಾರಿಗಳ ತನಿಖೆ ನಡೆಸುವ ಸಮಿತಿಗೆ ಡಾ.ಆರ್. ವಿಶಾಲ್ ಅವರನ್ನು ನೇಮಿಸಲಾಗಿದೆ.

2019-20ನೇ ಸಾಲಿನಿಂದ 2022-23ನೇ ಸಾಲಿನವರೆಗೆ ಬಿಬಿಎಂಪಿಯಲ್ಲಿ ಕೈಗೊಂಡಿರುವ ಅಮೃತ ನಗರೋತ್ಥಾನ ಅನುದಾನದಡಿಯಲ್ಲಿ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಹಾಗೂ ಪಾಲಿಕೆಯ ಅನುದಾನದಡಿಯಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳ ಬಗ್ಗೆ ಟೆಂಡರ್ ಪೂರ್ವದಲ್ಲಿ ಮತ್ತು ಟೆಂಡರ್ ಕರೆದ ನಂತರದ ಪ್ರಕ್ರಿಯೆಗಳು, ಬಿಲ್ ಪಾವತಿ ಮತ್ತು ಕಾಮಗಾರಿ ಗುಣಮಟ್ಟದ ಕಾಮಗಾರಿಯ ಅವಶ್ಯಕತೆ ಮತ್ತು ಕಾಮಗಾರಿ ಅನುಷ್ಠಾನದ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ನಾಲ್ಕು ತನಿಖಾ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಬೇಕು. ತನಿಖಾ ಸಮಿತಿಗಳ ರಚನೆ ಮತ್ತು ಸಮಿತಿಗಳಿಗೆ ತನಿಖಾ ವ್ಯಾಪ್ತಿಯನ್ನೂ ಇದೇ ಟಿಪ್ಪಣಿಯಲ್ಲಿ ಡಿ. ಕೆ. ಶಿವಕುಮಾರ್ ಅವರು ರಾಕೇಶ್ಸಿಂಗ್ ಅವರಿಗೆ ಸೂಚಿಸಿದ್ದರು ಎಂಬುದು ಟಿಪ್ಪಣಿಯಿಂದ ತಿಳಿದು ಬಂದಿದೆ.

ಈ ಹಿಂದೆ ಇದ್ದ ಸರಕಾರದ ಆಡಳಿತಾವಧಿಯಲ್ಲಿ ತನ್ನ ಸ್ವ-ಪಕ್ಷದ ಕ್ಷೇತ್ರಗಳಿಗೆ ಅನಗತ್ಯ ಯೋಜನೆಗೆ ಅನುದಾನವನ್ನು ಮನಸೋ ಇಚ್ಛೆ ನೀಡಿ ಆನಂತರ ತಮಗೆ ಬೇಕಾದ ಗುತ್ತಿಗೆದಾರರಿಗೆ ಟೆಂಡರ್ ನೀಡಿ ಟೆಂಡರ್ನಲ್ಲಿ ಅವ್ಯವಹಾರ ನಡೆಸಿ ಕಾಮಗಾರಿಗಳನ್ನೇ ಕೈಗೊಳ್ಳದೆ ಬಿಲ್ನ್ನು ಪಡೆದು ವ್ಯಾಪಕ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ.

ಇದರ ಫಲವಾಗಿ ಬೆಂಗಳೂರು ನಗರದ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಹಿಂದಿನ ಸರಕಾರ ಸಂಪೂರ್ಣ ವಿಫಲವಾಗಿದ್ದು ಸಾರ್ವಜನಿಕರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ರಸ್ತೆಗುಂಡಿಯಿರದ ರಸ್ತೆಗಳೇ ಇಲ್ಲವೆಂಬಂತಾಗಿದೆ. ಇಂದಿನ ಬೆಂಗಳೂರು ನಗರ ಅಕ್ಷರಶಃ ಕಸದಗುಡ್ಡೆಯಾಗಿದ್ದು ಘನತ್ಯಾಜ್ಯ ನಿರ್ವಹಣೆ, ಯೋಜನೆಗಳ ಅನುಷ್ಠಾನ, ಮಳೆನೀರುಗಾಲುವೆಗಳ ನಿರ್ಮಾಣ, ನಿರ್ವಹಣೆ ಹಾಗೂ ರಸ್ತೆ ನಿರ್ಮಾಣ, ನಿರ್ವಹಣೆ ಕಾಮಗಾರಿಗಳಲ್ಲೂ ಸಹ ಭಾರೀ ಭ್ರಷ್ಟಾಚಾರ ಎಸಗಿರುವುದು ಮೇಲ್ನೋಟಕ್ಕೆ ಸಾರ್ವಜನಿಕರ ದೂರುಗಳಿಂದ ತಿಳಿದು ಬಂದಿದೆ.

share
-ಜಿ.ಮಹಾಂತೇಶ್
-ಜಿ.ಮಹಾಂತೇಶ್
Next Story
X