ವಿಟ್ಲ: ವಿಪರೀತ ಜ್ವರದಿಂದ ಯುವಕ ನಿಧನ
ವಿಟ್ಲ: ಮಂಗಿಲಪದವು ಬನಾರಿ ನಿವಾಸಿ ಯುವಕನೊಬ್ಬ ವಿಪರೀತ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಅಬೂಬಕ್ಕರ್ ಸಿದ್ದೀಕ್ (30) ಮೃತ ಯುವಕ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ವಿಟ್ಲ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಃ ವಿಟ್ಲ ಸಮೀಪದ ಮೇಗಿನಪೇಟೆ ಕಾಟ್ರಸ್ ನಿವಾಸಿಯಾದ್ದ ಇವರು, ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ಬಾಬಟ್ಟ ಬನಾರಿ ಎಂಬಲ್ಲಿ ನೆಲೆಸಿದ್ದರು
Next Story