ಬಾರಿಸು ಕನ್ನಡ ಡಿಂಡಿಮ....

ಪ್ರತಿ ವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ.
ಮೈಸೂರು ರಾಜ್ಯ(ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.
ಕರ್ನಾಟಕ ಸರ್ಕಾರದಿಂದ ಇದೇ ದಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪುಗೊಂಡವು.
ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯದ ಉದಯವಾಯಿತು.
ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು.
1956 ರ ನವೆಂಬರ್ 1ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು.
ಮೈಸೂರು ರಾಜ್ಯದ ಹೆಸರು ನವೆಂಬರ್ 1, 1973 ರಂದು "ಕರ್ನಾಟಕ" ಎಂದು ಬದಲಾಯಿತು.