ಐಪಿಎಲ್ ಹರಾಜು ಪ್ರಕ್ರಿಯೆ ನಡೆಸಿದ ಹರಾಜುಗಾರ್ತಿ ಮಲ್ಲಿಕಾ ಸಾಗರ್ ಯಾರು?

ಸೌದಿಯ ಜಿದ್ದಾದಲ್ಲಿ ನಡೆದ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆ ನಡೆಸಿಕೊಟ್ಟ ಮಲ್ಲಿಕಾ ಸಾಗರ್ ಎಲ್ಲರ ಗಮನ ಸೆಳೆದಿದ್ದಾರೆ
ಮುಂಬೈ ಮೂಲದ ಮಲ್ಲಿಕಾ ಸಾಗರ್ ಫಿಲಡೆಲ್ಫಿಯಾದ ಬ್ರೈನ್ ಮಾವರ್ ಕಾಲೇಜಿನಲ್ಲಿ ಕಲಾ ಇತಿಹಾಸದಲ್ಲಿ ಪದವಿ ಪಡೆದಿದ್ದಾರೆ
ಜಗತ್ತಿನ ಶ್ರೇಷ್ಠ ಹರಾಜುಗಾರರಲ್ಲಿ ಒಬ್ಬರು ಎಂದು ಗುರುತಿಸಿಕೊಂಡಿರುವ ಮಲ್ಲಿಕಾ ಸಾಗರ್ ಕಲಾ ಸಂಗ್ರಾಹಕಿ ಮತ್ತು ಸಲಹೆಗಾರ್ತಿಯಾಗಿದ್ದಾರೆ.
ಮಲ್ಲಿಕಾ ಸಾಗರ್ ಸತತ ಎರಡನೇ ಬಾರಿಗೆ ಐಪಿಎಲ್ ಹರಾಜನ್ನು ನಡೆಸಿದ್ದಾರೆ
2001ರಲ್ಲಿ ಕ್ರಿಸ್ಟಿಸ್ ನಲ್ಲಿ ವೃತ್ತಿಜೀವನ ಪ್ರಾರಂಭಿಸಿದ ಮಲ್ಲಿಕಾ ಭಾರತೀಯ ಮೂಲದ ಮೊದಲ ಮಹಿಳಾ ಹರಾಜುಗಾರ್ತಿಯಾಗಿ ಇತಿಹಾಸ ನಿರ್ಮಿಸಿದ್ದಾರೆ.
ಹಲವಾರು ಮಹಿಳಾ ಪ್ರೀಮಿಯರ್ ಲೀಗ್ ಹರಾಜುಗಳ ನಿರ್ವಹಣೆ ಅವರು ಮಾಡಿದ್ದಾರೆ
2021ರ ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) ಆಟಗಾರರ ಹರಾಜಿಗೆ ಇವರು ಹರಾಜು ವ್ಯವಸ್ಥಾಪಕರಾಗಿದ್ದರು.