ಯಾದಗಿರಿ: 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಕುರಿತು ಜಾಗೃತಿ

ಯಾದಗಿರಿ: ಯಾದಗಿರಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಕಲ್ಯಾಣ ಕರ್ನಾಟಕ ವಿಭಾಗದ ದ್ವಿತೀಯ ಜಾಂಬೋರೇಟ್-2025 ಕಾರ್ಯಕ್ರಮದಲ್ಲಿ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸಲಾಯಿತು ಎಂದು ಯಾದಗಿರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದ ಕುಮಾರ ಅವರು ಹೇಳಿದರು.
36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಇಂದು ಯಾದಗಿರಿ ನಗರದ ಜನವರಿ 21ರ ಮಂಗಳವಾರ ರಂದು ಯಾದಗಿರಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಕಲ್ಯಾಣ ಕರ್ನಾಟಕ ವಿಭಾಗದ ದ್ವಿತೀಯ ಜಾಂಬೋರೇಟ್-2025 ಕಾರ್ಯಕ್ರಮದಲ್ಲಿ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಯಾದಗಿರಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಅಧ್ಯಕ್ಷರು ಸುರೇಶ ಆರ್.ಸಜ್ಜನ, ಶ್ರೀ ಬಂದಪ್ಪ ಅರಳಿ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಪಾಧ್ಯಕ್ಷರು ಶ್ರೀಮತಿ ಮಲ್ಲಮ್ಮ ಕೋಮನೂರು, ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ರಸ್ತೆ ಸುರಕ್ಷತೆ ಕುರಿತು ಮುಂಜಾಗೃತೆ ವಿಷಯಗಳ ಕುರಿತು ವಿಶೇಷ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.
ಈ ಸಂದರ್ಭದಲ್ಲಿ ಮೋಟಾರು ವಾಹನ ನಿರೀಕ್ಷಕರು ಅಯ್ಯಾಳಪ್ಪ, ಮೋಟಾರು ವಾಹನ ನಿರೀಕ್ಷಕರು ಚಂದ್ರಕಾಂತ, ಮೋಟಾರು ವಾಹನ ನಿರೀಕ್ಷಕರು ಚಂದ್ರಕಾಂತ, ಹಾಗೂ ಅಧೀಕ್ಷಕರು ಮೌನೇಶ, ಪ್ರಥಮ ದರ್ಜೆ ಸಹಾಯಕ ಶಿವಕುಮಾರ, ಕಾಶಿನಾಥ, ಸಿಬ್ಬಂದಿಗಳು, ಇನ್ನಿತರರು ಉಪಸ್ಥಿತರಿದ್ದರು.