ಯಾದಗಿರಿ | ಕೊಡೇಕಲ್ ಸರ್ಕಾರಿ ಭೂಮಿ ಅಕ್ರಮ ಮಾರಾಟ ಆರೋಪಿಸಿ ಪ್ರತಿಭಟನೆ

ಸುರಪುರ : ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಅಕ್ರಮ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ ನಗರದಲ್ಲಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟ ದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಕೆಂಭಾವಿ ರಸ್ತೆಯಲ್ಲಿನ ಶ್ರೀ ಮಡಿವಾಳ ಮಾಚಿದೇವ ವೃತ್ತದ ಬಳಿ ನಡೆದ ಪ್ರತಿಭಟನೆಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಬೊಮ್ಮನಹಳ್ಳಿ ಭಾಗವಹಿಸಿ ಮಾತನಾಡಿ, ಕೊಡೆಕಲ್ ಗ್ರಾಮದಲ್ಲಿ 15 ಎಕರೆ ಎಷ್ಟು ಸರ್ಕಾರಿ ಜಮೀನು ಅಕ್ರಮವಾಗಿ ಮಾರಾಟ ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.
ಲೋಕಾಯುಕ್ತರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿ ಸಿರಸ್ತೆದಾರ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ತಾಲೂಕು ಅಧ್ಯಕ್ಷ ನಾಗರಾಜ ದರ್ಬಾರಿ, ಮುಖಂಡರಾದ ವೆಂಕಟೇಶ, ದೇವಪ್ಪ ,ನಾಗರಾಜ, ಹಣಮಂತ್ರಾಯ, ಅಂಬರೀಶ, ಶಿವು ಸೇರಿದಂತೆ ಅನೇಕರು ಭಾಗವಹಿಸಿದ್ದರು.
Next Story