ಯಾದಗಿರಿ | ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳವು ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರನ ಬಂಧನ
ಯಾದಗಿರಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಅವರನ್ನು ಶಹಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಅವರಿಗೆ ಸೇರಿದ ಶ್ರೀ ಲಕ್ಷ್ಮೀ ತಿಮ್ಮಪ್ಪ ರೈಸ್ ಮಿಲ್ ಮೇಲೆ ಶನಿವಾರ (ಜ.27) ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಅನ್ನಭಾಗ್ಯ ಯೋಜನೆಯ 550 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Next Story