ಯಾದಗಿರಿ: ಖಬರಸ್ಥಾನದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ
ಯಾದಗಿರಿ: ಸುರಪುರ ನಗರದ ಝಂಡದಕೇರಾ ಸಂತ್ರಸವಾಡಿ ಬಳಿಯಲ್ಲಿನ ಖಬರಸ್ಥಾನದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ ಅಮಾನವೀಯ ಘಟನೆ ವರದಿಯಾಗಿದೆ.
ಸೋಮವಾರ ಬೆಳಿಗ್ಗೆ ಪ್ಲಾಸ್ಟಿಕ್ ವಸ್ತುಗಳನ್ನು ಆಯುವವರು ದಫನ ಭೂಮಿಯ ಬಳಿ ಹೋದಾಗ ನವಜಾತ ಶಿಶುವಿನ ಮೃತದೇಹ ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮೃತದೇಹ ಇರುವ ಬಗ್ಗೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಪಿಎಸ್ಐ ಶರಣಪ್ಪ ಹವಾಲ್ದಾರ ಹಾಗೂ ಸಿಬ್ಬಂದಿಗಳು ಆಗಮಿಸಿ ಶಿಶುವಿನ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ಕಳುಹಿಸಿ, ಆಸ್ಪತ್ರೆಯ ಹಿಂಭಾಗದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು ಎಂದು ತಿಳಿದುಬಂದಿದೆ.
ಮೃತದೇಹ ಎಸೆದು ಹೋಗಿರುವ ಹೆತ್ತವರ ಕುರಿತು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದು, ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Next Story