ಯಾದಗಿರಿ | ಸಚಿವ ರಹೀಂ ಖಾನ್ ನಾಳೆ ಯಾದಗಿರಿ ಜಿಲ್ಲಾ ಪ್ರವಾಸ

ರಹೀಂ ಖಾನ್
ಯಾದಗಿರಿ : ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಜ.20ರ ಸೋಮವಾರ ಯಾದಗಿರಿ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.
ಜ.20ರ ಸೋಮವಾರ ದಂದು ಬೆಳಿಗ್ಗೆ 6.30 ಗಂಟೆಗೆ ಬೀದರ್ ನಿಂದ ನಿರ್ಗಮಿಸಿ ಬೆಳಿಗ್ಗೆ 10.30 ಗಂಟೆಗೆ ಯಾದಗಿರಿ ಜಿಲ್ಲೆಗೆ ಆಗಮಿಸಿ ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ ಹಂತ-4ರಡಿ ನಗರಸಭೆ ಕಾರ್ಯಾಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ನಂತರ ಮಧ್ಯಾಹ್ನ 12 ಗಂಟೆಗೆ ಸಚಿವರ ಅಧ್ಯಕ್ಷತೆಯಲ್ಲಿ ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ತದನಂತರ ಯಾದಗಿರಿ ಗಂಜ್ ಸರ್ಕಲ್ ಯಾದಗಿರಿ ನಗರದಲ್ಲಿ ಸಮಸ್ತ ಮುಸ್ಲಿಂ ಬಾಂದವರಿಂದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.