ಯಾದಗಿರಿ | ʼನಶ ಮುಕ್ತ ಭಾರತ ಅಭಿಯಾನʼ ಕಾರ್ಯಕ್ರಮ
ಯಾದಗಿರಿ : ಮದ್ಯಪಾನ, ಧೂಮಪಾನ ಇನ್ನಿತರ ದುಷ್ಚಟಗಳಿಂದಾಗುವ ದುಷ್ಪರಿಣಾಮದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶರಣಪ್ಪ ಪಾಟೀಲ್ ಅವರು ಹೇಳಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ 2025ರ ಜನವರಿ 8ರ ಬುಧವಾರ ದಂದು ಸುರಪುರ ತಾಲ್ಲೂಕಿನ ಮಾಲಗತ್ತಿ ಗ್ರಾಮ ಪಂಚಾಯತಿಯಲ್ಲಿ “ನಶ ಮುಕ್ತ ಭಾರತ ಅಭಿಯಾನ” ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮದ್ಯಪಾನ, ಧೂಮಪಾನ ಇನ್ನಿತರ ದುಷ್ಚಟಗಳಿಂದಾಗುವ ದುಷ್ಪರಿಣಾಮದ ಮೂಡಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Next Story