ಯಾದಗಿರಿ | ನರೇಗಾ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾಯತ್ ಐಇಸಿ ಸಂಯೋಜಕರ ಭೇಟಿ
ಯಾದಗಿರಿ : ಸುರಪುರ ತಾಲ್ಲೂಕಿನ ಆಲ್ದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾಯತ್ ಐಇಸಿ ಸಂಯೋಜಕ ಮಲ್ಲಿಕಾರ್ಜುನ ದೇವಾಪುರ ಭೇಟಿ ನೀಡಿ, ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಕೂಲಿ ಹಣದ ಬಗ್ಗೆ, ಕೆಲಸದ ಪ್ರಮಾಣ, ಕೆಲಸದ ಅವಧಿ ಮತ್ತು ಏಕೀಕೃತ ಉಚಿತ ಸಹಾಯವಾಣಿ ಬಗ್ಗೆ ಸೇರಿದಂತೆ ಇತರ ವಿಷಯಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಡಾಟಾ ಎಂಟ್ರಿ ಆಪರೇಟರ್ ರಾಮಚಂದ್ರ ಸೇರಿದಂತೆ ಉದ್ಯೋಗ ಖಾತ್ರಿ ಕೂಲಿಕಾರ್ಮಿಕರು ಭಾಗವಹಿಸಿದ್ದರು.
Next Story