Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಏಳನೇ ಸುತ್ತಿನ ಜಾನುವಾರು...

ಯಾದಗಿರಿ | ಏಳನೇ ಸುತ್ತಿನ ಜಾನುವಾರು ಕಾಲುಬಾಯಿ ರೋಗ ಲಸಿಕಾ ಅಭಿಯಾನ ಯಶಸ್ವಿಯಾಗಿ ಹಮ್ಮಿಕೊಳ್ಳಲು ಅಪರ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 April 2025 2:41 PM IST
share
Photo of Metting

ಯಾದಗಿರಿ : ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಯಾದಗಿರಿ ಇವರ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಎ.21ರಿಂದ ಜೂ.4 ರವರೆಗೆ ಯಶಸ್ವಿಯಾಗಿ ಹಮ್ಮಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 7ನೇ ಸುತ್ತಿನ ಜಾನುವಾರು ಕಾಲುಬಾಯಿ ಲಸಿಕಾ ಅಭಿಯಾನ ಕುರಿತು ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಜಾನುವಾರು ಕಾಲುಬಾಯಿ ರೋಗದಿಂದ ರಾಜ್ಯ ಹಾಗೂ ಜಿಲ್ಲೆಯನ್ನು ಮುಕ್ತ ಮಾಡುವಲ್ಲಿ ಸಹಕರಿಸಬೇಕು. ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಅಂಟು ಜಾಡ್ಯವಾಗಿದ್ದು, ಲಸಿಕೆ ಹಾಕುವುದೊಂದೇ ರೋಗ ನಿಯಂತ್ರಿಸಲು ಏಕೈಕ ಮಾರ್ಗವಾಗಿರುವುದರಿಂದ ರೈತರು ಹಾಗೂ ಹೈನುಗಾರರು ಸಹಕರಿಸುವಂತೆ ಸಲಹೆ ನೀಡಿದರು.

ಕಾಲುಬಾಯಿ ರೋಗವು ಎತ್ತು ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಿಗೆ ತಗಲುವ ಮಾರಕ ರೋಗವಾಗಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಹಾಕಲು ಪಶುವೈದ್ಯರು, ಪಶು ಸಖಿಯರು, ಡಿಪ್ಲೊಮಾ ವಿದ್ಯಾರ್ಥಿಗಳು ಆಗಮಿಸಿದ ಸಂದರ್ಭದಲ್ಲಿ ಸಹಕರಿಸುವಂತೆ ತಿಳಿಸಿರುವ ಅವರು, ಯಾವುದೇ ಜಾನುವಾರು ಈ ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಲು ಅವರು ಸೂಚಿಸಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ರಾಜು ದೇಶಮುಖ್ ಅವರು ಮಾತನಾಡಿ, ವರ್ಷದಲ್ಲಿ ಕನಿಷ್ಠ ಎರಡು ಬಾರಿ ಲಸಿಕೆ ಹಾಕುವುದರಿಂದ ರೋಗ ತಡೆಗಟ್ಟಲು ಸಾಧ್ಯ. ಮೂರು ತಿಂಗಳ ಮೇಲ್ಪಟ್ಟ ಎಲ್ಲ ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ 3 ರಿಂದ 5 ವಾರದೊಳಗೆ ಬೂಸ್ಟರ್ ಲಸಿಕೆ ಹಾಕಿಸಲಾಗುತ್ತದೆ. ಅದರಂತೆ ದನ ಮತ್ತು ಎಮ್ಮೆಗಳಿಗೂ ಲಸಿಕೆ ಹಾಕಲಾಗುತ್ತಿದೆ. ಗರ್ಭಧರಿಸಿದ ಹಸು ಎಮ್ಮೆಗಳಿಗೂ ಲಸಿಕೆ ಹಾಕಲಾಗುತ್ತಿದ್ದು, ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಸಹ ಪ್ರತಿ ಆರು ತಿಂಗಳಿಗೊಮ್ಮೆ ಕೈಗೊಳ್ಳುವ ಈ ಸಾಮೂ‌ಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ, ಲಸಿಕೆ ಹಾಕಿಸುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ 20ನೇ ಜಾನುವಾರು ಗಣತಿ ಅನ್ವಯ ಒಟ್ಟು 2,90,774 ದನ, ಎಮ್ಮೆ, ಹಂದಿ ಗುರುತಿಸಿದೆ. ಈ ಲಸಿಕೆ ಕಾರ್ಯಕ್ರಮದ ಅಂಗವಾಗಿ 2,84,400 ಲಸಿಕೆ (ಡೋಝ್‌ಗಳಲ್ಲಿ) ಸರಬರಾಜು ಆಗಿವೆ. ಜಿಲ್ಲೆಯ 19 ಪಶು ಚಿಕಿತ್ಸಾಲಯ ಹಾಗೂ ಪಶು ಆಸ್ಪತ್ರೆ ಗಳಲ್ಲಿ178 ವ್ಯಾಕ್ಸಿನ್ ಕ್ಯಾರಿಯರ್ಸ್‌ ಲಭ್ಯ ಇವೆ. 193 ಲಸಿಕೆದಾರರ ವ್ಯವಸ್ಥೆ ಮಾಡಲಾಗಿದೆ. ತುರ್ತು ಔಷಧಿಗಳು ಲಭ್ಯ ಇವೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿದರು. ಪಶುವೈದ್ಯಾಧಿಕಾರಿಗಳು ಹಾಗೂ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X