ಯಾದಗಿರಿ: ಅಂಬೇಡ್ಕರ್ ಗೆ ಅವಮಾನ ಪ್ರಕರಣ; ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು. ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಈ ಪ್ರತಿಭಟನೆ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆಯಿತು ಜಿಲ್ಲಾ ಸಂಚಾಲಕರಾದ ಶರಣು ಎಸ್ ನಾಟೇಕರ್ ಮಾತನಾಡಿದರು.
ದೆಹಲಿಯ ಸಂಸತ್ ಭವನದಲ್ಲಿ ಕಳೆದ ಡಿ.17 ರಂದು ಮಾತನಾಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎಂದು ಹೇಳುವುದು ಒಂದು ಪ್ಯಾಷನ್ ಆಗಿದೆ. ಇಷ್ಟು ಬಾರಿ ದೇವರ ಹೇಳಿದ್ದರೆ ಏಳೇಳು ಜನ್ಮಕೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ್ದಾರೆ. ಜೊತೆಗೆ ತಾವು ಆಡಿರುವ ಮಾತುಗಳನ್ನು ಸಮರ್ಥನೆಯನ್ನು ಮಾಡಿಕೊಂಡಿದ್ದರು. ಅಮಿತ್ ಶಾ ಅವರ ದೇಶದ್ರೋಹಿ ಮಾತುಗಳನ್ನು ಖಂಡೀಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಹೋದ್ಯೋಗಿಗಳು ಗೃಹ ಸಚಿವರ ಬೆನ್ನಿಗೆ ನಿಂತಿದ್ದಾರೆ. ಇಂಥವರಿಂದ ನಾವು ಯಾವುದೇ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲೀ ಬದುಕುತ್ತಿರುವ ಪ್ರತಿಯೊಬ್ಬರೂ ಸಹ ಇದನ್ನು ಖಂಡೀಸಬೇಕಿದೆ ಎಂದರು.
ಪ್ರಜಾಪ್ರಭುತ್ವದ ಪಿತಾಮಹ ಡಾ.ಬಿ.ಆರ್ ಅಂಬೇಡ್ಕರ್ ಅವರು ಮತ್ತು ಸಂವಿಧಾನದ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡುವವರ ವಿರುದ್ಧ ರಾಷ್ಟ್ರ ದ್ರೋಹ ಪ್ರಕರಣವನ್ನು ದಾಖಲಿಸಬೇಕು ಜೊತೆಗೆ ಅವರನ್ನು ಗಡಿಪಾರು ಮಾಡಬೇಕು, ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಅಂಬೇಡ್ಕರ್ ಸಂವಿಧಾನದ ಬಗ್ಗೆ ಅವಹೇಳಕಾರಿ ಹೇಳಿಕೆಯನ್ನು ನೀಡುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಬೇಕು, ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರು ಸಹ ಕೇಂದ್ರ ರಾಜ್ಯ ಸರ್ಕಾರಗಳು ಸರಿಯಾದ ದಿಟ್ಟ ಕ್ರಮಗೊಳ್ಳುತ್ತಿಲ್ಲ ಆದ್ದರಿಂದ ದಲಿತರ ಮೇಲೆ ದೌರ್ಜನ್ಯ ನಡೆದರೆ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ನೇರ ಹೊಣೆಗಾರರನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟಕಾರರು ಒತ್ತಾಯಿಸಿದರು.
ಬಳಿಕ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಭೀಮರಾಯ ಸಿಂಧಿಗೇರಿ, ಬಾಬು ತಲಾರಿ ಸಮಿತಿಯ ಸಲಹೆಗಾರರು, ಶಿವಶರಣಪ್ಪ ವಾಡಿ ರಾಜ್ಯ ಸಮಿತಿಯ ಸದಸ್ಯರು, ಮಂಜುಳಾ ಸುರಪುರ ರಾಜ್ಯ ಮ.ಘ.ಸಂ.ಸಂಚಾಲಕಿ, ಅಂಜು ಯಾದಗಿರಿ ಜಿ.ಸಂ, ಸ, ಸಂಚಾಲಕರು, ಭೀಮರಾಯ ಕಾಗಿ ಜಿಲ್ಲಾ ಖಜಾಂಚಿ, ಖಂಡಪ್ಪ ಸಾಹುಕಾರ, ಮಹಾದೇವಪ್ಪ, ಶರಣು ಮಮ್ಮದರ್, ಸಾಬಣ್ಣ ಬೇಗರ್, ಗಿರೀಶ್ ಎಂ ಚಟ್ಟೇರಕರ್ ಗಂಗಮ್ಮ ಇನ್ನಿತರರು ಭಾಗವಹಿಸಿದ್ದರು