Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸಾರ್ವಜನಿಕರ ಜನದಟ್ಟಣೆಯ...

ಯಾದಗಿರಿ | ಸಾರ್ವಜನಿಕರ ಜನದಟ್ಟಣೆಯ ಹಿನ್ನೆಲೆಯಲ್ಲಿ ಎರಡು ಸಾವಿರ ಬಸ್ಸುಗಳು ಖರೀದಿಗೆ ಕ್ರಮ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ9 April 2025 5:00 PM IST
share
Photo of Program

ಯಾದಗಿರಿ : ಸಾರ್ವಜನಿಕರ ಜನದಟ್ಟಣೆಯ ಹಿನ್ನೆಲೆಯಲ್ಲಿ ಹೊಸದಾಗಿ ಎರಡು ಸಾವಿರ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದು ರಾಜ್ಯ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.

ಮಾಧ್ವಾರ್ ಗ್ರಾಮದಲ್ಲಿ ಇಂದು ನೂತನ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದಾಗಿ ಬಸ್ ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದ್ದು, ಸಾರ್ವಜನಿಕರ ಜನದಟ್ಟಣೆಯು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಹೊಸದಾದ ಎರಡು ಸಾವಿರ ಬಸ್ ಗಳನ್ನು ಖರೀದಿಸಲಾಗುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ ಸುಮಾರು 600 ರಿಂದ 700 ಬಸ್ ಗಳನ್ನು ಇದರಲ್ಲಿ ಒದಗಿಸಲಾಗುವುದು ಎಂದು ಹೇಳಿದರು.

ರಸ್ತೆ ಸಾರಿಗೆ ನಿಗಮದಲ್ಲಿನ ಸಿಬ್ಬಂದಿಗಳ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. 10,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದಿನ ಸರ್ಕಾರಿ ಸಿಬ್ಬಂದಿಗಳ ಮಕ್ಕಳ ಅನುಕಂಪ ಆಧಾರಿತ 1,000 ಹುದ್ದೆಗಳ ನೇಮಕಾತಿ ಹಾಗೂ 9,000 ಬಸ್ ಚಾಲಕರ, ನಿರ್ವಾಹಕರ ನೇಮಕಾತಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತ ತಕ್ಷಣ ನೇಮಕಾತಿ ಆಗಲಿದೆ ಎಂದು ಹೇಳಿದರು.

ಈ ಭಾಗದಲ್ಲಿ ಸೈದಾಪುರ ವೇಗವಾಗಿ ಬೆಳೆಯುತ್ತಿದೆ. ಇಲ್ಲಿ ಬಸ್ ನಿಲ್ದಾಣದ ಅವಶ್ಯಕತೆ ಬಗ್ಗೆ ಕಲಬುರಗಿ ಸಂಸದರು ಹಾಗೂ ಗುರುಮಠಕಲ್ ಶಾಸಕರು ಗಮನಕ್ಕೆ ತಂದಿದ್ದು, ಸಂಸದರ ನಿಧಿ, ಶಾಸಕರ ನಿಧಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಥವಾ ಸಾರಿಗೆ ಸಂಸ್ಥೆ ನಿಗಮದ ಅನುದಾನದಡಿ ಈ ವರ್ಷದಲ್ಲಿಯೇ ತಲಾ 2.5 ಕೋಟಿ ರೂ. ಗಳಂತೆ ಅನುದಾನ ಒದಗಿಸಿ ಒಟ್ಟು 5 ಕೋ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ ಸೈದಾಪುರ ಬಸ್ ಡಿಪೋಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಬಸ್ ನಿಲ್ದಾಣಗಳಿಗೆ ದೇಶದ ಮಹನಿಯರ ನಾಮಕರಣ ಮಾಡುವುದು ಸಂತಸದ ಸಂಗತಿ. ಈ ಹಿನ್ನೆಲೆಯಲ್ಲಿ ಯಾದಗಿರಿ ಕೇಂದ್ರ ಬಸ್ ನಿಲ್ದಾಣಕ್ಕೆ ಮೈಲಾರ ಮಲ್ಲಯ್ಯನ ನಾಮಕರಣ ಹಾಗೂ ಗುರುಮಠಕಲ್ ಬಸ್ ನಿಲ್ದಾಣಕ್ಕೆ ಖಾಸಾಮಠದ ನಾಮಕರಣ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ವರದಿ ಪಡೆಯಲಾಗುವುದು ಎಂದು ಹೇಳಿದರು.

ಕಲಬುರಗಿ ಲೋಕಸಭಾ ಸದಸ್ಯರಾದ ಡಾ.ರಾಧಾಕೃಷ್ಣ ದೊಡ್ಡಮನಿ ಅವರು ಮಾತನಾಡಿ, ಈ ಭಾಗದಲ್ಲಿ ಸಾರಿಗೆ ಸಂಪರ್ಕ ಹೆಚ್ಚಿಸಬೇಕು. ಗುರಮಠಕಲ್ ಬಸ್ ನಿಲ್ದಾಣಕ್ಕೆ ಖಾಸಾಮಠದ ನಾಮಕರಣಕ್ಕೆ ಕ್ರಮ ಕೈಗೊಳ್ಳುವಂತೆ ಹಾಗೂ ಸೈದಾಪುರ ಹೈಟೆಕ್ ಬಸ್ ನಿಲ್ದಾಣ ಮಂಜೂರಾತಿ ಗೆ ಕ್ರಮ ಕೈಗೊಳ್ಳಲು ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ್ ಅವರು, ಈ ಭಾಗದಲ್ಲಿ ಕೈಗಾರಿಕಾ ಕ್ಷೇತ್ರ ಬೆಳೆಯುತ್ತಿರುವುದರಿಂದ ಸೈದಾಪುರ ಬಸ್ ನಿಲ್ದಾಣ ಮಂಜೂರು ಮಾಡಬೇಕು. ಈ ಭಾಗದ ದೇವಸ್ಥಾನಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು.ಹೆಚ್ಚಿನ. ಬ‌ಸ್ ಗಳ ಸೌಲಭ್ಯ ಕಲ್ಪಿಸಬೇಕು, ಯಾದಗಿರಿ ಬಸ್ ನಿಲ್ದಾಣ, ಕುಕ್ಕೆ ಮೈಲಾರ ಮಲ್ಲಯ್ಯನ ಹಾಗೂ ಗುರುಮಠಕಲ್ ಬಸ್ ನಿಲ್ದಾಣಕ್ಕೆ ಖಾಸಾಮಠದ ನಾಮಕರಣ ಮಾಡಲು ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಮ್.ರಾಚಪ್ಪ ಮಾತನಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಶಂಕ್ರಪ್ಪ ಉಪಸ್ಥಿತರಿದ್ದರು. ವಿಭಾಗೀಯ ನಿಯಂತ್ರಣಾಧಿಕಾರಿ ಸುನೀಲ್ ಕುಮಾರ್ ಚಂದರಗಿ ಸ್ವಾಗತಿಸಿದರು. ಶರಣಕುಮಾರ್ ವಟಾರ್ ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X