ಯಾದಗಿರಿ | ಪಾದಚಾರಿಗಳಿಬ್ಬರಿಗೆ ಆಟೋ ಢಿಕ್ಕಿ; ಆಸ್ಪತ್ರೆಗೆ ದಾಖಲು

ಯಾದಗಿರಿ : ಹೊಸ ಬಸ್ ನಿಲ್ದಾಣ ಹತ್ತಿರ ಪಾದಚಾರಿಗಳಿಬ್ಬರಿಗೆ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಆಟೋ ಒಂದು ಢಿಕ್ಕಿ ಹೊಡೆದ ಪರಿಣಾಮ ಅಲ್ಪಸ್ವಲ್ಪ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಳಿಗೇರಿ ಗ್ರಾಮದ ನಿವಾಸಿಗಳಾದ ಬಸ್ಸಮ್ಮ ಮತ್ತು ಸಂಗೀತಾ ಗಾಯಳುಗಳು ಎಂದು ತಿಳಿದು ಬಂದಿದೆ. ಗಾಯಳುಗಳು ಶರಣಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೋಲಿಸ್ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ಯಾದಗಿರಿ ನಗರ ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story