ಯಲ್ಲಾಪುರ: ತರಕಾರಿ ಸಾಗಾಟದ ಲಾರಿ ಪಲ್ಟಿ; 9 ಮಂದಿ ಮೃತ್ಯು, 16 ಮಂದಿ ಗಂಭೀರ

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಪರಿಣಾಮ 9 ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗುಳ್ಳಾಪುರ ಬಳಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.
ಲಾರಿಯಲ್ಲಿ ತರಕಾರಿಗಳನ್ನು ಹಾವೇರಿಯಿಂದ ಕುಮಟಾ ಕಡೆಗೆ ಸಾಗಿಸಲಾಗುತ್ತಿತ್ತು. ಲಾರಿಯಲ್ಲಿ ಸುಮಾರು 25 ಜನರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ 16 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Next Story